spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗಿನಲ್ಲಿ ನಾಲ್ವರು ಶಿಕ್ಷಕರು, 5 ಮಂದಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಮಡಿಕೇರಿ:

ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿಯೂ ಸಹ ಶಾಲೆಗಳನ್ನು ಆರಂಭಿಸಲಾಗಿದ್ದು,ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಅದರಂತೆ ಇದುವರೆಗೆ ನಾಲ್ವರು ಶಿಕ್ಷಕರು ಹಾಗೂ ಐದು ಮಂದಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ದೃಢಪಡಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 3528 ಶಿಕ್ಷಕರು ಮತ್ತು 5145 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 4 ಶಿಕ್ಷಕರಿಗೆ ಮತ್ತು 5 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.
ಈ ಸಂಬಂಧ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಮತ್ತು ಸೋಂಕಿತರನ್ನು ಸಂಪರ್ಕತಡೆಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು1,24,697 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 5825ಮಂದಿಯಲ್ಲಿ ಪಾಸಿಟಿವ್,1,17,942ನೆಗೆಟಿವ್ ವರದಿ ಬಂದಿದೆ.930 ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಸೋಂಕಿತರ ಪೈಕಿ 5,689ಮಂದಿ ಗುಣಮುಖರಾಗಿದ್ದು, 80 ಮಂದಿ ಸಾವಿಗೀಡಾಗಿದ್ದಾರೆ.56 ಸಕ್ರಿಯ ಪ್ರಕರಣಗಳಿದ್ದು,8 ಮಂದಿ ಕೋವಿಡ್ ಆಸ್ಪತ್ರೆ,48 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಪ್ರಕರಣಗಳು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿವೆ ಎಂದು ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss