ಕೊಡಗು: ಜಿಲ್ಲೆಯಲ್ಲಿ ಭಾನುವಾರ 27 ಮಂದಿಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದರೆ, 38 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 23,040 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಪೈಕಿ 978 ಮಂದಿಯಲ್ಲಿ ಪಾಸಿಟಿವ್,21,986 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು,76 ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ.
ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 73,ಕೋವಿಡ್ ಕೇರ್ ಸೆಂಟರ್ ನಲ್ಲಿ107 ಹಾಗೂ ಹೋಂ ಐಸೋಲೇಷನ್ ನಲ್ಲಿ 100 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 12 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದ್ದು, ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 6 ಪ್ರದೇಶವನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಗೆ ಇತರೆ ದೇಶ ಹಾಗೂ ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದ್ದು, ಅದರಂತೆ ಇತರೆ ದೇಶದ 4,ಇತರೆ ರಾಜ್ಯದ 987 ಹಾಗೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದ 4901ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ ಎಂದು ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.