Tuesday, August 16, 2022

Latest Posts

ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ: ತಲಕಾವೇರಿಯಲ್ಲಿ ಮನೆ ಮೇಲೆ ಬೆಟ್ಟ ಕುಸಿದು ನಾಲ್ವರು ಕಣ್ಮರೆ?

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಯು ಹಾಗೂ ವರುಣನ ಆರ್ಭಟ ಮುಂದುವರಿದಿದ್ದು, ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬುಧವಾರ ತಡರಾತ್ರಿ ಭೂಕುಸಿತ ಉಂಟಾಗಿದೆ.
ಪರಿಣಾಮವಾಗಿ ತಲಕಾವೇರಿ ಕ್ಷೇತ್ರದ ಎರಡು ಅರ್ಚಕ ಕುಟುಂಬಗಳ ಮನೆಗಳು ಮಣ್ಣಿನಡಿ ಸಿಲುಕಿದ್ದು, ಒಂದು ಕುಟುಂಬದ ನಾಲ್ವರು ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ.
ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ಕ್ಷಿಪ್ರ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದೆ.
ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ, ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುವುದಾಗಿ ಹೇಳಲಾಗಿದ್ದು, ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿದ್ದು,4 ಜನ ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.
ಜಿಲ್ಲೆಯ ಅಡ್ವಾನ್ಸಡ್ ರೆಸ್ಕ್ಯೂ ಟೀಂ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಮತ್ತೊಂದೆಡೆ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಕುಶಾಲನಗರದ ಕುವೆಂಪು ಹಾಗೂ ಸಾಯಿ ಬಡಾವಣೆಗಳು ಜಲಾವೃತಗೊಂಡಿದ್ದು, ಅಲ್ಲಿನ ಕೆಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
ಸಿದ್ದಾಪುರದ ಕರಡಿಗೋಡು ಹಾಗೂ ವೀರಾಜಪೇಟೆಯ ಅಯ್ಯಪ್ಪ ಬೆಟ್ಟ ಮುಂತಾದ ಪ್ರದೇಶಗಳ ಅಸುರಕ್ಷಿತ ಸ್ಥಳಗಳಲ್ಲಿ ವಾಸಿಸುತ್ತಿದ್ದ ಕುಟುಂಬಗಳನ್ನು ನಿರಾಶ್ರಿತರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss