Friday, August 19, 2022

Latest Posts

ಕೊಡಗು:ಕೊರೋನಾ ಸೋಂಕಿಗೆ ಮಹಿಳೆ ಬಲಿ

ಮಡಿಕೇರಿ: ಕೋವಿಡ್ ಸೋಂಕಿನಿಂದ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಸಾವು ಸಂಭವಿಸಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30 ಕ್ಕೇರಿದೆ.

ಸೋಮವಾರಪೇಟೆ ತಾಲೂಕಿನ ಯಡವನಾಡು ಗ್ರಾಮದ ನಿವಾಸಿ, ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ 96 ವರ್ಷದ ಮಹಿಳೆಯೊಬ್ಬರು ಸೆ.14ರಂದು ಕಫ ಸಂಬಂಧಿತ ಸಮಸ್ಯೆಯ ಕಾರಣ ಚಿಕಿತ್ಸೆಗಾಗಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.

ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿ, ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರು ಬುಧವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!