Tuesday, July 5, 2022

Latest Posts

ಕೊಡಗು| ನಗರಸಭೆ ವಾಣಿಜ್ಯ ಮಳಿಗೆಗಳ ವರ್ತಕರ ಬಾಡಿಗೆ ಮನ್ನಾ ಮಾಡಲು ಜಿಲ್ಲಾಧಿಕಾರಿಗಳಿಗೆ ಮನವಿ

ಮಡಿಕೇರಿ: ಮಡಿಕೇರಿ ನಗರಸಭೆಗೆ ಸಂಬoಧಿಸಿದ ವಾಣಿಜ್ಯ ಸಂಕೀರ್ಣಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಿಗಳ ಮೂರು ತಿಂಗಳ ಮಾಸಿಕ ಬಾಡಿಗೆಯನ್ನು ಮನ್ನಾ ಮಾಡಬೇಕು ಎಂದು ವರ್ತಕರು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.
ಕೊರೋನಾ ಮಹಾಮಾರಿಯಿಂದಾಗಿ ಇಂದು ದೇಶ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಈ ರೋಗದ ಗಂಭೀರತೆಯನ್ನು ಸಾಮಾನ್ಯ ಜನರು ಕೂಡಾ ಇದೀಗ ಅರ್ಥಮಾಡಿಕೊಂಡು ಸರಕಾರದ ಹೊಸ ನಿಯಮಗಳಿಗೆ ಅನುಗುಣವಾಗಿ ಲಾಕ್‌ಡೌನ್‌ನಿಂದ ಹೊರ ಬಂದು ಮಾಮೂಲಿನ ಸ್ಥಿತಿಯತ್ತ ಮರಳುತ್ತಿದ್ದಾರೆ. ಆದರೆ ಕೊಡಗಿನ ಸ್ಥಿತಿ ಭಿನ್ನವಾಗಿದೆ. ಕಳೆದ ಎರಡು ವರ್ಷದ ಕೆಳಗೆ ಕೊಡಗಿನಲ್ಲಿ ಸಂಭವಿಸಿದ ಭೂ ಕುಸಿತ, ಜಲ ಪ್ರಳಯದ ಗುಂಗಿನಿAದ ಜನ ಇನ್ನೂ ಪೂರ್ಣ ಪ್ರಮಾಣದಲ್ಲಿ ಹೊರಬಂದಿಲ್ಲ. ವ್ಯಾಪಾರ ವಹಿವಾಟು ಚೇತರಿಸಿಕೊಳ್ಳುತ್ತಿರುವಾಗಲೇ ಕೊರೋನಾದ ಅಬ್ಬರದಿಂದ ಜನಸಾಮಾನ್ಯರ ಜೊತೆಗೆ ವ್ಯಾಪಾರಸ್ಥರು ಕೂಡಾ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ವ್ಯಾಪಾರಿಗಳ ಪರವಾಗಿ ನಗರ ಬಿಜೆಪಿ ಮಾಜಿ ಅಧ್ಯಕ್ಷ ಮಹೇಶ್ ಜೈನಿ ಅವರು ಜಿಲ್ಲಾಧಿಕಾರಿಗಳ ಗಮನಸೆಳೆದಿದ್ದಾರೆ.
ಮಡಿಕೇರಿ ನಗರದಲ್ಲಿ ನಗರಸಭೆಗೆ ಸೇರಿದ ವಾಣಿಜ್ಯ ಸಂಕೀರ್ಣಗಳಲ್ಲಿ ಮಳಿಗೆಗಳನ್ನು ಬಾಡಿಗೆಗೆ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವವರು ಕೂಡಾ ತೀರಾ ಕೊರೋನಾ ಲಾಕ್‌ಡೌನ್‌ನಿಂದ ಕಳೆದ ಮೂರು ತಿಂಗಳುಗಳಿAದ ವ್ಯಾಪಾರವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಗರಸಭೆಗೆ ಬಾಡಿಗೆ ಪಾವತಿಸಲು ತೊಂದರೆಯಾಗುತ್ತಿದೆ. ಈ ಸಂಬAಧವಾಗಿ ಹಿಂದಿನ ನಗರಸಭಾ ಆಯುಕ್ತರಿಗೆ ವ್ಯಾಪಾರಸ್ಥರ ಪರವಾಗಿ ಮನವಿ ಸಲ್ಲಿಸಲಾಗಿದೆ. ನಗರಸಭೆಗೆ ಆಡಳಿತಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ವ್ಯಾಪಾರಿಗಳ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕಳೆದ ಮೂರು ತಿಂಗಳ ಬಾಡಿಗೆಯನ್ನು ಮನ್ನಾ ಮಾಡಬೇಕು ಎಂದು ಅವರು ಮನವಿಯಲ್ಲಿ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss