ಕೊಡಗು| ಆಟೋದಲ್ಲಿ ಗಾಂಜಾ ಸಾಗಾಟ; ಇಬ್ಬರ ಬಂಧನ

0
57

ಕೊಡಗು: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪತ್ತೆ ಹಚ್ಚಿದ ವೀರಾಜಪೇಟೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 41 ಸಾವಿರ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಗೋಣಿಕೊಪ್ಪ ಕಡೆಯಿಂದ ವೀರಾಜಪೇಟೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವೀರಾಜಪೇಟೆ ಕಾವೇರಿ ಕಾಲೇಜು ಬಳಿ ಆಟೋವನ್ನು ತಡೆದು ಪರಿಶೀಲಿಸಿದ್ದಾರೆ.

ಈ ಸಂದರ್ಭದಲ್ಲಿ ಆಟೋದಲ್ಲಿ 1.182 ಕೆ.ಜಿ.ಗಾಂಜಾ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕಲ್ಯಾಣಗಿರಿಯ ಡಿ.ಐ.ಮಹಮ್ಮದ್ ಮತ್ತು ಪಿರಿಯಾಪಟ್ಟಣ ತಾಲೂಕಿನ ಜಬೀವುಲ್ಲಾ ಖಾನ್ ಎಂಬವರನ್ನು ಬಂಧಿಸಿ ಆಟೋ ಸಹಿತ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಅವರ ನಿರ್ದೇಶದಂತೆ ವೀರಾಜಪೇಟೆ ಡಿವೈಎಸ್‍ಪಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ವೀರಾಜಪೇಟೆ ವೃತ್ತ ನಿರೀಕ್ಷಕ ಕ್ಯಾತೇಗೌಡ, ವೀರಾಜಪೇಟೆ ಠಾಣಾಧಿಕಾರಿ ಹೆಚ್.ಎಸ್. ಭೋಜಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here