Friday, August 12, 2022

Latest Posts

ಕೊಡಗು| ಕಾವೇರಿ ನೀರಾವರಿ ನಿಗಮದ ಕಟ್ಟಡ ದುರಸ್ತಿಗೆ ಕ್ರಿಯಾ ಯೋಜನೆ ರೂಪಿಸಲು ಶಾಸಕ ಅಪ್ಪಚ್ಚುರಂಜನ್ ನಿರ್ದೇಶನ

ಕುಶಾಲನಗರ: ಕಾವೇರಿ ನೀರಾವರಿ ನಿಗಮದ ಅಧೀನದಲ್ಲಿರುವ ಹಾರಂಗಿ ಮತ್ತು ಚಿಕ್ಲಿಹೊಳೆ ಜಲಾಶಯಗಳ ಬಳಿ ಪಾಳು ಬಿದ್ದಿರುವ ಕಟ್ಟಡಗಳನ್ನು ದುರಸ್ತಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಿಯಾಯೋಜನೆ ರೂಪಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ನೀರಾವರಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನಿರ್ದೇಶನ ನೀಡಿದರು.
ಹಾರಂಗಿ ಮತ್ತು ಚಿಕ್ಲಿಹೊಳೆ ಜಲಾಶಯ ವ್ಯಾಪ್ತಿಯ ಅನೇಕ ಕಟ್ಟಡಗಳು ಪಾಳುಬಿದ್ದು, ಬೀಳುವ ಹಂತವನ್ನು ತಲುಪಿರುವುದನ್ನು ಖುದ್ದು ಪರಿಶೀಲಿಸಿದ ಅವರು, ಕಟ್ಟಡಗಳು ಸುಸ್ಧಿತಿಯಲ್ಲಿದ್ದು, ಅವುಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದರೆ ಆ ಕಟ್ಟಡಗಳು ಬಳಕೆಗೆ ಯೋಗ್ಯವಾಗಲಿವೆ. ಈ ಹಿನ್ನೆಲೆಯಲ್ಲಿ ಕಟ್ಟಡಗಳನ್ನು ದುರಸ್ತಿ ಮಾಡುವ ಚಿಂತನೆ ಮಾಡಲಾಗಿದೆ ಎಂದು ಹೇಳಿದರು.
ಚಿಕ್ಲಿಹೊಳೆ ಜಲಾಶಯಕ್ಕೆ ಸಂಬಂಧಿಸಿದ ಹತ್ತು ಕಟ್ಟಡಗಳು ಪಾಳುಬಿದ್ದು ಹಾಳಾಗುವ ಬದಲು ಅವುಗಳನ್ನು ದುರಸ್ತಿ ಮಾಡಿ ಸರಕಾರಿ ನೌಕರರಿಗೆ ಬಾಡಿಗೆ ರೂಪದಲ್ಲಿ ನೀಡಬಹುದಾಗಿದೆ ಇದರಿಂದ ಈ ವ್ಯಾಪ್ತಿಯ ಸರಕಾರಿ ನೌಕರರಿಗೆ ಅನುಕೂಲವಾಗಲಿದೆ. ಈಗಾಗಲೇ ಇಲ್ಲಿನ ಕಛೇರಿಗಳು ಕುಶಾಲನಗರ ಮತ್ತು ಹಾರಂಗಿಯಲ್ಲಿರುವುದರಿಂದ ದುರಸ್ತಿಗೆ ಕ್ರಿಯಾ ಯೋಜನೆ ತಯಾರಿಸಿಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಹಾರಂಗಿಯಲ್ಲಿರುವ ಕಟ್ಟಡಗಳನ್ನು ದುರಸ್ತಿಪಡಿಸಿ ಕುಶಾಲನಗರದ ಕಛೇರಿಗಳನ್ನು ಸ್ಥಳಾಂತರಿಸಲು ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕರು ಇದೇ ಸಂದರ್ಭ ತಿಳಿಸಿದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ ಬಿ. ಭಾರತೀಶ, ತಾಲೂಕು ಬಿಜೆಪಿ. ಅಧ್ಯಕ್ಷ ಮನುಕುಮಾರ್ ರೈ, ತಾಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ, ರಮೇಶ್, ಉಪಾಧ್ಯಕ್ಷ ಕೃಷ್ಣಪ್ಪ, ಪ್ರಾಧಿಕಾರದ ನಿರ್ದೇಶಕ ವೈಶಾಕ್, ಸಹಕಾರ ಸಂಘದ ಅಧ್ಯಕ್ಷ ಆರ್. ಕೆ. ಚಂದ್ರು, ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss