Thursday, June 30, 2022

Latest Posts

ಕೊಡಗು| ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ: ಮೊದಲ ಲಸಿಕೆ ಪಡೆದ ಪೌರಸೇವಾ ಇಲಾಖೆಯ ಪೊನ್ನಮ್ಮ

ಹೊಸದಿಗಂತ ವರದಿ, ಕೊಡಗು:

ಪೌರ ಸೇವಾ ಇಲಾಖೆಯ ಡಿ ದರ್ಜೆ ನೌಕರರಾಗಿರುವ ಪೊನ್ನಮ್ಮ ಅವರಿಗೆ ಕೋವಿಡ್ ವಿರುದ್ಧದ ಮೊದಲ ಲಸಿಕೆ ನೀಡುವ ಮೂಲಕ ಕೊಡಗು ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಜಿಲ್ಲೆಯ ಕೊಡಗು ವೈದ್ಯಕೀಯ ಸಂಸ್ಥೆಯ ಜಿಲ್ಲಾ ಆಸ್ಪತ್ರೆ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕು ಆಸ್ಪತ್ರೆ ಹಾಗೂ ನಗರದ ಸಂತ ಮೈಕಲರ ಶಾಲೆ ಮತ್ತು ಕಾಕೋಟುಪರಂಬು ಆಸ್ಪತ್ರೆಯಲ್ಲಿ ಕೋವಿಡ್ ವಿರುದ್ಧದ ಲಸಿಕೆ ಹಾಕಲಾಗುತ್ತಿದೆ.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸುನಿಲ್ ಸುಬ್ರಮಣಿ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರ ಸಮ್ಮುಖದಲ್ಲಿ ಪೌರ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲಾಯಿತು.

ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಅಧೀಕ್ಷಕ ಡಾ.ಲೋಕೇಶ್, ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ.ಗೋಪಿನಾಥ್, ಡಾ.ರೂಪೇಶ್, ಡಾ.ಆನಂದ್, ಡಾ.ಮಹೇಶ್ ಮತ್ತಿತರರು ಇದ್ದರು.

ಜಿಲ್ಲೆಗೆ ಈಗಾಗಲೇ 4,000 ಕೋವಿನ್ ಲಸಿಕೆ ತಲುಪಿದ್ದು, ಲಸಿಕಾ ಅಭಿಯಾನಕ್ಕೆ ಮಡಿಕೇರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಚಾಲನೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದರು.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಈಗಾಗಲೇ ಜಿಲ್ಲೆಯಲ್ಲಿ 6,560 ಕೊರೊನಾ ವಾರಿಯರ್ಸ್‍ನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss