ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 95 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮಡಿಕೇರಿ ನಗರದ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3458ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಅರ್ಧ ಶತಕಕ್ಕೆ ತಲುಪಿದೆ.
ಗುರುವಾರ ಬೆಳಗ್ಗೆ ಮಡಿಕೇರಿ ತಾಲೂಕಿನಲ್ಲಿ 41, ಸೋಮವಾರಪೇಟೆ ತಾಲೂಕಿನಲ್ಲಿ 32, ವೀರಾಜಪೇಟೆ ತಾಲೂಕಿನಲ್ಲಿ 20, ಹೊರ ಜಿಲ್ಲೆಯವರ ಪೈಕಿ ಇಬ್ಬರಲ್ಲಿ ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ 2674 ಮಂದಿ ಗುಣಮುಖರಾಗಿದ್ದು, 734 ಸಕ್ರಿಯ ಪ್ರಕರಣಗಳಿವೆ.50 ಮಂದಿ ಸಾವಿಗೀಡಾಗಿದ್ದು,ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 554 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳ ಪ್ರಾಥಮಿಕ/ದ್ವಿತೀಯ ಸಂಪರ್ಕದ 17,032ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ. ಇದುವರೆಗೆ 47,885 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 3,363 ಪಾಸಿಟಿವ್,44,055 ನೆಗೆಟಿವ್ ವರದಿ ಬಂದಿದೆ.467ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 111, ಕೋವಿಡ್ ಕೇರ್ ಸೆಂಟರ್ ನಲ್ಲಿ 83, ಹೋಂ ಐಸೋಲೇಷನ್ ನಲ್ಲಿ 445 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.