ಹೊಸದಿಗಂತ ವರದಿ,ಕೊಡಗು:
ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತ ಸೋಮಲ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು.
ಜಿಲ್ಲಾಧಿಕಾರಿಯಾಗಿದ್ದ ಅನೀಸ್ ಕಣ್ಮಣಿ ಜಾಯ್ ಅವರು ಸುದೀರ್ಘ ರಜೆಯಲ್ಲಿ ತೆರಳಿರುವ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನದಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಂದ ಚಾರುಲತಾ ಅಧಿಕಾರ ಸ್ವೀಕರಿಸಿದರು.
ಚಾರುಲತ ಸೋಮಲ್ ಅವರು ಈ ಹಿಂದೆ ಕೊಡಗು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.