Thursday, July 7, 2022

Latest Posts

ಕೊಡಗು: ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಛೇರಿ ಸೀಲ್ ಡೌನ್

ಮಡಿಕೇರಿ: ಕೊಡಗು ಜಿಲ್ಲೆಯ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲದೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಛೇರಿಯನ್ನು ನಿಯಮದ ಪ್ರಕಾರ ಸ್ಯಾನಿಟೈಸ್ ಮಾಡಿ ಸೀಲ್‍ಡೌನ್ ಮಾಡಲಾಗಿದೆ. ಆ ಸಿಬ್ಬಂದಿಯವರು ವಾಸವಿದ್ದ ವಸತಿ ಗೃಹದ ಸುತ್ತಲಿನ 8 ವಸತಿಗೃಹಗಳ ವ್ಯಾಪ್ತಿಯನ್ನು ಕಂಟೈನ್‍ಮೆಂಟ್ ವಲಯ ಎಂದು ಘೋಷಿಸಲಾಗಿದೆ.

ಅಲ್ಲಿನ ವಸತಿ ಗೃಹಗಳಲ್ಲಿ ವಾಸವಿದ್ದ ಸಿಬ್ಬಂದಿ ಹಾಗೂ ಅವರ ಪರಿವಾರದವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿದ್ದು, ಸೋಂಕಿತ ಸಿಬ್ಬಂದಿಯ ಪ್ರಾಥಮಿಕ ಸಂಪರ್ಕ ಹೊಂದಿದ ಸುಮಾರು 15 ವ್ಯಕ್ತಿಗಳನ್ನು ಕೋವಿಡ್-19 ಪರೀಕ್ಷೆಗೆ ಮಾದರಿಯನ್ನು ನೀಡುವಂತೆ ಹಾಗೂ ಹೋಂ ಕ್ವಾರಂಟೈನ್‍ನಲ್ಲಿ ಇರಲು ಸೂಚಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರ ಆರೋಗ್ಯದ ಬಗ್ಗೆ ತೀವ್ರ ಕಾಳಜಿಯನ್ನು ತೋರಲಾಗಿದ್ದು, ಪ್ರಥಮ ಹಂತದಲ್ಲಿ ಈಗಾಗಲೇ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರ ಕೋವಿಡ್-19 ಪರೀಕ್ಷೆಯನ್ನು ನಡೆಸಲಾಗಿ ಈವರೆಗೆ ಸಿಬ್ಬಂದಿಯವರಲ್ಲಿ ಕೋವಿಡ್-19 ಪಾಸಿಟಿವ್ ವರದಿ ಇದೇ ಪ್ರಥಮವಾಗಿದೆ.

ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಂಡು ಪೊಲೀಸ್ ಇಲಾಖೆಯ ವತಿಯಿಂದ ವಿತರಿಸಲಾಗಿರುವ ಸುರಕ್ಷಾ ಸಾಮಾಗ್ರಿಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯದ ಕಡೆಗೆ ಒತ್ತು ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss