Sunday, August 14, 2022

Latest Posts

ಕೊಡಗು ಜಿಲ್ಲೆಗೂ ವ್ಯಾಪಿಸಿದೆ ‘ಮಹಾ’ರಾಷ್ಟ್ರದ ‘ನಂಜು’: ಸೋಮವಾರಪೇಟೆ ಯುವಕನಿಗೆ ಕೊರೋನಾ ದೃಢ

ಮಡಿಕೇರಿ: ಮಹಾರಾಷ್ಟ್ರದ ನಂಜು ಕೊಡಗು ಜಿಲ್ಲೆಗೂ ವ್ಯಾಪಿಸಿದೆ.
ಮಹಾರಾಷ್ಟ್ರದಿಂದ ಬಂದು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಸೋಮವಾರಪೇಟೆ ತಾಲೂಕಿನ 25 ವರ್ಷದ ಯುವಕನಿಗೆ ಕೊರೋನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ.
ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಳೆದ ವಾರವಷ್ಟೇ ಮುಂಬೈನಿಂದ ಬಂದಿದ್ದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಕೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆದು ಮುಖರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss