Saturday, July 2, 2022

Latest Posts

ಕೊಡಗು ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಾಗದಂತೆ ಉಸ್ತುವಾರಿ ಸಚಿವರ ಸೂಚನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ಕೊರತೆಯಾಗದಂತೆ ಅವಶ್ಯವಾದಷ್ಟು ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕೆಂದು ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದಾರೆ.
ಕೋವಿಡ್-19 ಸೋಂಕಿತರ ಚಿಕಿತ್ಸೆ ಹಾಗೂ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವುದರ ಕುರಿತಂತೆ ಕೊಡಗು ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳೊಂದಿಗೆ ಬೆಂಗಳೂರಿನ ವಿಕಾಸಸೌಧದಿಂದ ವಿಡಿಯೋ ಸಂವಾದ ನಡೆಸಿದರು.
ಆಮ್ಲಜನಕ ಕೊರತೆಯಾಗದಂತೆ ಎಲ್ಲಾ ಕ್ರಮ ಕೈಗೊಳ್ಳಬೇಕು ಹಾಗೂ ಪರಿಸ್ಥಿತಿಯನ್ನು ಆಗಿಂದಾಗ್ಗೆ ಅವಲೋಕಿಸುತ್ತಾ ತಮಗೆ ವರದಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ಸೋಂಕು ಹರಡದಂತೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲು ಸೂಚನೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss