Thursday, July 7, 2022

Latest Posts

ಕೊಡಗು| ಜಿಲ್ಲೆಯಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ: ನಿನ್ನೆ ಮತ್ತೆ 19 ಸೋಂಕಿತರು ಪತ್ತೆ

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ 19 ಹೊಸ ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 131 ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಮಡಿಕೇರಿ ತಾಲೂಕಿನಲ್ಲಿ  10 ಸೋಮವಾರಪೇಟೆ ತಾಲೂಕಿನಲ್ಲಿ 7 ವೀರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ ಎಂದು ಅವರು ವಿವರಿಸಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6527 ರಷ್ಟಾಗಿದ್ದು, ಈ ಪೈಕಿ 6313 ಮಂದಿ ಗುಣಮುಖರಾಗಿದ್ದಾರೆ. 131 ಸಕ್ರಿಯ ಪ್ರಕರಣಗಳಿದ್ದು, 83ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಪಾಲಿಬೆಟ್ಟದ ಟಾಟಾ ಎಸ್ಟೇಟ್, ಗೋಣಿಕೊಪ್ಪ ಅರುವತ್ತೊಕ್ಕಲುವಿನ ಮುತ್ತಪ್ಪ ದೇವಾಲಯ ಬಳಿ, ಮಡಿಕೇರಿ ತಾಲೂಕಿನ ಚೇಲಾವರ, ಮುತ್ತಾರುಮುಡಿ, ಐಕೊಳ, ಕಗ್ಗೋಡ್ಲು, ಮಡಿಕೇರಿ ನಗರದ ಸುಬ್ರಮಣ್ಯ ನಗರ, ಮಲ್ಲಿಕಾರ್ಜುನ ನಗರ, ಐಟಿಐ ಸಮೀಪ, ಸೋಮವಾರಪೇಟೆ ತಾಲೂಕಿನ ಬಾಣಾವರ, ಚೆಟ್ಟಳ್ಳಿಗಳಲ್ಲಿ ಹೊಸದಾಗಿ ಕಂಟೈನ್ ಮೆಂಟ್ ವಲಯಗಳನ್ನು ತೆರಯಲಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 98ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ  ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss