Sunday, June 26, 2022

Latest Posts

ಕೊಡಗು: ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವವರ ಸಂಖ್ಯೆ 773ಕ್ಕೇರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತ 35 ದಿನಗಳಿಂದ ಹೊಸದಾಗಿ ಯಾವುದೇ ಕೊರೋನಾ ಪ್ರಕರಣ ಪತ್ತೆಯಾಗದಿದ್ದರೂ, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವವರ ಸಂಖ್ಯೆ 773ಕ್ಕೇರಿದೆ.
ವಿದೇಶ ಪ್ರವಾಸ ಇತಿಹಾಸ ಇದ್ದು, ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದು, ಇತರೆ ಜಿಲ್ಲೆ-ರಾಜ್ಯಗಳಿಂದ ಪಾಸ್‌ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಇತರ ರಾಜ್ಯದ 18 ಹಾಗೂ ರಾಜ್ಯದ ಇತರ ಜಿಲ್ಲೆಗಳ 755 ಮಂದಿ ಗೃಹ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 429 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದ್ದು, 299 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 129 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದ್ದು, ಪ್ರಸಕ್ತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 42 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss