Friday, July 1, 2022

Latest Posts

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭ ಶ್ರಮಿಸಿದ ಎನ್‌ಡಿಆರ್‌ಎಫ್ ತಂಡಕ್ಕೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಮಳೆಗಾಲದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಜನ ಹಾಗೂ ಜಾನುವಾರುಗಳ ಪ್ರಾಣ ರಕ್ಷಣೆಗಾಗಿ ಹಗಲಿರುಳು ಶ್ರಮಿಸಿದ ಎನ್‌ಡಿಆರ್‌ಎಫ್ ತಂಡಕ್ಕೆ ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಬೀಳ್ಕೊಡಲಾಯಿತು.
ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಸಂಕಷ್ಟ ಉಂಟಾಯಿತು. ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಸಂಭವಿಸಿದ ಭೂಕುಸಿತದಿಂದ ತಲಕಾವೇರಿಯ ಪ್ರಧಾನ ಅರ್ಚಕ ನಾರಾಯಣಾಚಾರ್ ಮತ್ತು ಕುಟುಂಬದವರು ಕಣ್ಮರೆಯಾದರು. ಪ್ರಧಾನ ಅರ್ಚಕರ ಕುಟುಂಬ ಸದಸ್ಯರ ಮೃತ ದೇಹ ಪತ್ತೆ ಹಚ್ಚುವಲ್ಲಿ ಎನ್‌ಡಿಆರ್‌ಎಫ್ ತಂಡವು ಹಲವು ತೊಂದರೆಗಳ ನಡುವೆಯೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿದ್ದು, ಜಿಲ್ಲಾಡಳಿತ ವತಿಯಿಂದ ಧನ್ಯವಾದ ಸಮರ್ಪಿಸುವುದಾಗಿ ಹೇಳಿದರು.
ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕ್ಷಮಾ ಮಿಶ್ರ ಅವರು ಮಾತನಾಡಿ ಎನ್‌ಡಿಆರ್‌ಎಫ್ ತಂಡದ ಧೈರ್ಯ ಮತ್ತು ಸಾಹಸವು ಸ್ಪೂರ್ತಿದಾಯಕ, ಮಳೆ, ಚಳಿ, ಗಾಳಿ ಎನ್ನದೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಪೊಲೀಸ್ ಇಲಾಖೆ ವತಿಯಿಂದ ತಂಡಕ್ಕೆ ಹೃದಯ ಸ್ಪರ್ಶಿ ಕೃತಜ್ಞತೆಗಳು ಎಂದು ತಿಳಿಸಿದರು.
ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್, ಡಿವೈಎಸ್‌ಪಿ. ದಿನೇಶ್ ಕುಮಾರ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಪೊಲೀಸ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ, ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಇತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss