Tuesday, July 5, 2022

Latest Posts

ಕೊಡಗು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ದಿಗಂತ ವರದಿ, ಮಡಿಕೇರಿ:

ಚಳಿಗಾಲ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚತೊಡಗಿದ್ದು, ಒಂದಂಕಿಯಲ್ಲಿದ್ದ ಪ್ರಕರಣಗಳ ಸಂಖ್ಯೆ ಮತ್ತೆ ಎರಡಂಕಿಗೆ ತಲುಪಿದೆ.
ಶುಕ್ರವಾರ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಮಡಿಕೇರಿ ತಾಲೂಕಿನಲ್ಲಿ 4, ಸೋಮವಾರಪೇಟೆ ತಾಲೂಕಿನಲ್ಲಿ 10 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5309ಕ್ಕೆ ಏರಿಕೆಯಾಗಿದ್ದು, ಈ ಪೈಕಿ 5158 ಮಂದಿ ಗುಣಮುಖರಾಗಿದ್ದಾರೆ. 79 ಸಕ್ರಿಯ ಪ್ರಕರಣಗಳಿದ್ದು, 72 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 74ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss