Wednesday, October 21, 2020
Wednesday, October 21, 2020

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಸೋಮವಾರ ಬಿಟ್ಟುಬಿಟ್ಟು ಮಳೆಯಾಗುವ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಭಾಗಮಂಡಲ, ಶಾಂತಳ್ಳಿ, ಮಡಿಕೇರಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ನಾಡಿನ ಜೀವನಾಡಿ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಇದರೊಂದಿಗೆ ಕಾವೇರಿ ಭಾಗದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯಕ್ಕೂ ಸಹ ಒಳಹರಿವು ಅಧಿಕಗೊಂಡಿದೆ.
ಆಗಸ್ಟ್ ಮೊದಲ ವಾರದಲ್ಲಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೆಚ್ಚು ಹಾನಿ ಸಂಭವಿಸಿತ್ತು. ಬಳಿಕ ಕೆಲ ದಿನಗಳಿಂದ ಬಿಡುವು ಪಡೆದಿದ್ದ ಮಳೆ, ಮತ್ತೆ ಬಿರುಸುಗೊಂಡಿದೆ. ಜೊತೆಗೆ ವಿಪರೀತ ಶೀತ ಗಾಳಿ ಬೀಸುತ್ತಿದೆ.
ಸೆಪ್ಟೆಂಬರ್, 19ರಂದು ಜಿಲ್ಲೆಯಲ್ಲಿ ಸರಾಸರಿ 19.73 ಮಿಲಿ ಮೀಟರ್ ಮಳೆಯಾಗಿದ್ದರೆ, ಸೆ.20ರಂದು 66.75 ಮಿ.ಮೀ. ಹಾಗೂ ಸೆ.21 ರಂದು ಮಳೆಯ ಪ್ರಮಾಣವು 64.19 ಮಿ.ಮೀ. ರಷ್ಟಾಗಿದೆ.
ಭಾಗಮಂಡಲ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ 135 ಮಿ.ಮೀ., ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 131.20 ಮಿ.ಮೀ., ಮಡಿಕೇರಿ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ 96.40 ಮಿ.ಮೀ. ಗರಿಷ್ಠ ಮಳೆಯಾಗಿದೆ.
ಜಿಲ್ಲೆಯಲ್ಲಿ ಬೀಸುತ್ತಿರುವ ಗಾಳಿಗೆ ಅಲ್ಲಲ್ಲಿ ಮರಗಳು ರಸ್ತೆಗೆ ಉರುಳಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಅವುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿದ್ದಾರೆ. ಸೋಮವಾರ ಅಜ್ಜಲ್ಲಿ-ಶನಿವಾರಸಂತೆ ಮಾರ್ಗದ ರಸ್ತೆಯಲ್ಲಿ ಮರ ಬಿದ್ದಿದ್ದು, ಮರವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿದರು.
ಕಳೆದ ಮೂರು ದಿನಗಳಿಂದ ಹಾರಂಗಿ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಿದೆ. ಸೆ.19 ರಂದು ಜಲಾಶಯಕ್ಕೆ 2,981 ಕ್ಯುಸೆಕ್ ನೀರಿನ ಒಳಹರಿವಿದ್ದು, ಸೆ.20 ರಂದು ಒಳಹರಿವಿನ ಪ್ರಮಾಣ 5,819 ಕ್ಯುಸೆಕ್‍ಗೆ ಏರಿಕೆಯಾಗಿದೆ. ಸೆ.21 ರಂದು 8666 ಕ್ಯುಸೆಕ್‍ನಷ್ಟು ನೀರು ಜಲಾಶಯಕ್ಕೆ ಹರಿದು ಬಂದಿದೆ. ಈ ಮೂಲಕ ಸೋಮವಾರ ನದಿಗೆ ಹೆಚ್ಚುವರಿಯಾಗಿ 11,854 ಕ್ಯುಸೆಕ್ ನೀರನ್ನು ಹರಿಬಿಡಲಾಗಿದೆ.
ಧರೆಗುರುಳಿದ ವಿದ್ಯುತ್ ಕಂಬಗಳು: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಳೆದ ಕೆಲವು ದಿನಗಳಲ್ಲಿ 40 ರಿಂದ 50 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ. ಅಲ್ಲದೆ ಯಾವುದೇ ಟ್ರಾನ್ಸ್ ಫಾರ್ಮರ್‍ಗಳಿಗೂ ಹಾನಿ ಸಂಭವಿಸಿಲ್ಲ ಎಂದು ಸೆಸ್ಕ್ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ತಿಳಿಸಿದ್ದಾರೆ.
ವಿದ್ಯುತ್ ಕಂಬ ಬಿದ್ದು ಹಾನಿಗೀಡಾದ ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿ, ಸೆಸ್ಕ್ ತಂಡ ಅಲ್ಲಿನ ಹಾನಿಯನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆತಂಕ ಬೇಡ: ಜಿಲ್ಲೆಯ ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಜಿಲ್ಲಾಡಳಿತ ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿದ್ದು, ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ 24*7 ಕಂಟ್ರೋಲ್ ರೂಂ ಸಂಖ್ಯೆ 0827-221077, ವ್ಯಾಟ್ಸ್‍ಆಪ್ ಸಂಖ್ಯೆ 8550001077 ನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಸರ್ಕಾರದ ಮಾನದಂಡಗಳಡಿ 1761 ರೈತರು ಸಾಲಮನ್ನಾಗೆ ಅನರ್ಹ, 22745 ರೈತರಿಗೆ ಸೌಲಭ್ಯ: ಬ್ಯಾಲಹಳ್ಳಿ ಗೋವಿಂದಗೌಡ

ಕೋಲಾರ:  ಸರ್ಕಾರ ಸೂಚಿಸಿರುವ ಮಾನದಂಡಗಳಡಿ ಜಿಲ್ಲೆಯ ೨೨೭೪೫ ಮಂದಿಯ ಸಾಲ ಮನ್ನಾ ಆಗಿದೆ, ಉಳಿದಂತೆ ಸಾಲ ಮನ್ನಾಗೆ ಅರ್ಹರಲ್ಲದ ಅವಿಭಜಿತ ಜಿಲ್ಲೆಯ ೧೭೬೧ ರೈತರು ಕೂಡಲೇ ಪಡೆದ ಸಾಲವನ್ನು ಮರುಪಾವತಿ ಮಾಡುವಂತೆ ಕೋಲಾರ,ಚಿಕ್ಕಬಳ್ಳಾಪುರ...

Don't Miss

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...
error: Content is protected !!