Sunday, August 14, 2022

Latest Posts

ಕೊಡಗು ಜಿಲ್ಲೆಯಲ್ಲಿ ಸೋಮವಾರ 3 ಮಂದಿಯಲ್ಲಿ ಕೊರೋನಾ ಸೋಂಕು ದೃಢ, 15 ಮಂದಿ ಬಿಡುಗಡೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸೋಮವಾರ ಅತಿ ಕಡಿಮೆ ಅಂದರೆ 3 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಕುಶಾಲನಗರ ಮುಳ್ಳುಸೋಗೆ ಶ್ರೀನಿಧಿ ಬಡಾವಣೆಯ 23 ವರ್ಷದ ಮಹಿಳೆ, ಮಡಿಕೇರಿ ನಗರದ ಗಣಪತಿ ಬೀದಿ ಬದ್ರಿಯಾ ಮೀನು ಅಂಗಡಿ ಬಳಿಯ 53 ವರ್ಷದ ಪುರುಷ ಮತ್ತು ನಗರದ ವಾರ್ತಾ ಭವನ ಬಳಿಯ 80 ವರ್ಷದ ಪುರುಷರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1220ರಷ್ಟಾಗಿದ್ದು, ಕೊರೋನಾ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 953ಕ್ಕೆ ಏರಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇತರೆ ದೇಶ/ರಾಜ್ಯಗಳಿಂದ ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಅದರಂತೆ ಇತರ ರಾಜ್ಯಗಳಿಂದ ಬಂದಿರುವ 1174 ಹಾಗೂ ಕೊರೋನಾ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದ 6577 ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 25,425 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 1220 ಪ್ರಕರಣಗಳಲ್ಲಿ ಪಾಸಿಟಿವ್ ಹಾಗೂ 24,169 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 36 ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ.16 ಮಂದಿ ಸಾವಿಗೀಡಾಗಿದ್ದಾರೆ.
ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 81, ಕೋವಿಡ್ ಕೇರ್ ಸೆಂಟರ್‍ನಲ್ಲಿ 56 ಹಾಗೂ ಹೋಂ ಐಸೋಲೇಷನ್‍ನಲ್ಲಿ 114 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಹೊಸದಾಗಿ ಸೋಮವಾರ 3 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದ್ದು, ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 15 ಪ್ರದೇಶವನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss