Wednesday, August 17, 2022

Latest Posts

ಕೊಡಗು ಜಿಲ್ಲೆಯಲ್ಲಿ 17 ಮಂದಿ ಕೊರೋನಾ ಸೋಂಕಿನಿಂದ ಬಿಡುಗಡೆ, 19 ಮಂದಿಯಲ್ಲಿ ಸೋಂಕು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 19 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 17 ಮಂದಿ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇತರ ರಾಜ್ಯಗಳಿಂದ ಬಂದಿರುವ 1342 ಮಂದಿ ಹಾಗೂ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದ 6623 ಮಂದಿಯನ್ನು ಕಡ್ಡಾಯ ಸಂಪರ್ಕ ತಡೆಯಲ್ಲಿಡಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 25,809 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 1239 ಮಂದಿಯಲ್ಲಿ ಪಾಸಿಟಿವ್ ಹಾಗೂ 24,448 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 122 ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ. 16 ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 71, ಕೋವಿಡ್ ಕೇರ್ ಸೆಂಟರ್‍ನಲ್ಲಿ 44 ಹಾಗೂ
ಹೋಂ ಐಸೋಲೇಷನ್‍ನಲ್ಲಿ 138 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 6 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದ್ದು, ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 9 ಪ್ರದೇಶವನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!