Saturday, August 13, 2022

Latest Posts

ಕೊಡಗು ಜಿಲ್ಲೆಯಲ್ಲಿ 9 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಹೊಸದಾಗಿ 9 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿಯ ರಾಣಿಪೇಟೆಯ ಹೇಮರಾಜ್ ಕಾಂಪೌಂಡಿನ 36 ವರ್ಷದ ಮಹಿಳೆ, 16 ಮತ್ತು 11 ವರ್ಷದ ಬಾಲಕಿ,ಮಡಿಕೇರಿಯ ಮೈತ್ರಿ ಹಾಲ್ ಸಮೀಪದ ಪೊಲೀಸ್ ವಸತಿ ಗೃಹದ 38 ವರ್ಷದ ಪುರುಷ ಪೊಲೀಸ್ ಸಿಬ್ಬಂದಿ,ಕೂಡು ರಸ್ತೆಯ 54 ವರ್ಷದ ಪುರುಷ, ಸುಂಟಿಕೊಪ್ಪದ ಕಾನ್ ಬೈಲಿನ 15 ವರ್ಷದ ಬಾಲಕಿ,ಕುಶಾಲನಗರದ ಹುಲುಸೆಯ 45 ವರ್ಷದ ಪುರುಷ,ವೀರಾಜಪೇಟೆಯ ಗೋಣಿಕೊಪ್ಪದ ಈರಣ್ಣ ಕಾಲೋನಿಯ 45 ವರ್ಷದ ಮಹಿಳೆ, ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮುಖಾಂತರ ಮಡಿಕೇರಿಯ ಎಲ್ ಐ ಸಿ ವಸತಿ ಗೃಹದ 22 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 469ಕ್ಕೆ ಏರಿಕೆಯಾಗಿದ್ದು, ಈ ಪೈಕಿ 313 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 147 ಆಗಿದ್ದು, 9 ಮಂದಿ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss