Sunday, July 3, 2022

Latest Posts

ಕೊಡಗು ಜಿಲ್ಲೆ ಕೊರೋನಾ ಮುಕ್ತ ಆದರೂ 5690 ಮಂದಿಗೆ ಗೃಹ ಸಂಪರ್ಕ ತಡೆ!

ಮಡಿಕೇರಿ: ಕೊಡಗು ಜಿಲ್ಲೆ ಇದುವರೆಗೂ ಕೊರೋನಾ ಮುಕ್ತವಾಗಿದ್ದು, ಹೊರ ರಾಜ್ಯಗಳಿಂದ ಹಾಗೂ ಕರ್ನಾಟಕದ ಇತರ ಜಿಲ್ಲೆಗಳಿಂದ ಪಾಸ್‌ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಒಟ್ಟು ೫೬೯೦ ಮಂದಿ ಗೃಹ ಸಂಪರ್ಕ ತಡೆಯಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಕೊಡಗಿನಲ್ಲಿ ರಾಜ್ಯದ ಇತರ ಜಿಲ್ಲೆಗಳಿಂದ ಬಂದಿರುವ ೫೪೭೮ ಹಾಗೂ ಇತರ ರಾಜ್ಯಗಳಿಂದ ಬಂದಿರುವ ೨೧೨ ಮಂದಿ ಸೇರಿದಂತೆ ೫೬೯೦ ಮಂದಿ ಗೃಹ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ವಿದೇಶ ಪ್ರವಾಸ ಇತಿಹಾಸ ಇದ್ದು, ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ ೧೪ ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೯೪೭ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿದ್ದು, ೮೯೧ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, ೫೫ ಪ್ರಕರಣಗಳಲ್ಲಿ ವರದಿ ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆಯಲ್ಲಿ ೪೦ ಜನರು ದಾಖಲಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss