Wednesday, August 10, 2022

Latest Posts

ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ: ರೆಡ್ ಅಲರ್ಟ್ , ಎಚ್ಚರಿಕೆ

ಮಡಿಕೇರಿ : ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೆ.21 ರ ಬೆಳಗ್ಗೆ 8.30 ಗಂಟೆಯವರೆಗೆ ರೆಡ್ ಅಲರ್ಟ್ ಮತ್ತು ಸೆ. 21 ರ ಬೆಳಗ್ಗೆಯಿಂದ ಸೆ.22 ರ ಬೆಳಗ್ಗೆ ವರೆಗೆ ಆರೆಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದ್ದು, ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂ.08272-221077, ವಾಟ್ಸ್‍ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss