Saturday, June 25, 2022

Latest Posts

ಕೊಡಗು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಪರಾರಿಯಾಗಿದ್ದ ಡ್ರಗ್ಸ್ ದಂಧೆಕೋರರ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸಿ ಪೊಲೀಸರ ದಾಳಿಯ ಸಂದರ್ಭ ಕತ್ತಲೆಯಲ್ಲಿ ಪರಾರಿಯಾಗಿದ್ದ ಐವರ ಪೈಕಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ.
ಬೆಂಗಳೂರು ಬಾಣಸವಾಡಿ ನಿವಾಸಿಗಳಾದ ಸಾರಾ(28) ಹಾಗೂ ಫೈಝಲ್(19) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ಆಗಸ್ಟ್ 28ರಂದು ಕೊಡಗು ಪೊಲೀಸರು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಡಿಕೇರಿಯಲ್ಲಿ ವಾಹನ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಸಂದರ್ಭ ಮತ್ತೊಂದು ಶಿಫ್ಟ್ ಕಾರನ್ನು ಕುಶಾಲನಗರದವೆರೆಗೆ ಪೊಲೀಸರು ಬೆನ್ನಟ್ಟಿದ್ದರು. ಆದರೆ ಕಾರಿನಲ್ಲಿದ್ದ ಐವರು ಆರೋಪಿಗಳು ಕುಶಾಲನಗರದ ಬಡಾವಣೆಯೊಂದರ ಬಳಿ ಕಾರು ನಿಲ್ಲಿಸಿ ಕತ್ತಲೆಯಲ್ಲಿ ಪರಾರಿಯಾಗಿದ್ದರು.
ಬಂಧಿತ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಬೆಂಗಳೂರಿಗೆ ತೆರಳಿದ್ದ ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಬಾಣಸವಾಡಿಯಲ್ಲಿ ಮಹಿಳಾ ಆರೋಪಿ ಸಾರಾ ಮತ್ತು ಫೈಝಲ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಈ ಹಿಂದೆ ಬಂಧಿತರಾದವರಿಂದ 300 ಗ್ರಾಂ ಡ್ರಗ್ಸ್ ನ್ನು ವಶಕ್ಕೆ ಪಡೆಯಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಡಿವೈಎಸ್‍ಪಿ ದಿನೇಶ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss