Wednesday, June 29, 2022

Latest Posts

ಕೊಡಗು| ಬ್ಯೂಟಿಪಾರ್ಲರ್, ಸೆಲೂನ್ ತೆರೆಯಲು ಷರತ್ತುಬದ್ಧ ಅವಕಾಶ- ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ಮಡಿಕೇರಿ: ಕೋವಿಡ್-19 ನಿಗ್ರಹ ಸಂಬಂಧ ಸಾರ್ವಜನಿಕ ಹಿತಾಸಕ್ತಿಯಿಂದ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ವಯ ಮೇ೩ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿದ್ದ ಲಾಕ್‌ಡೌನ್‌ನ್ನು ಈಗಾಗಲೇ ಜಾರಿಯಲ್ಲಿರುವ ನಿರ್ಬಂಧ ಮತ್ತು ನಿಯಮಗಳೊಂದಿಗೆ ಮೇ18 ರ ಮಧ್ಯರಾತ್ರಿಯವರೆಗೆ ಮುಂದುವರೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಸರ್ಕಾರದ ಇತ್ತೀಚಿನ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಈಗಾಗಲೇ ವಿನಾಯಿತಿ ನೀಡಿರುವ ಅಂಶಗಳ ಪಟ್ಟಿಗೆ ಸೆಲೂನ್, ಬ್ಯೂಟಿ ಪಾರ್ಲರ್ ಮಳಿಗೆಗಳನ್ನು ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲಾಗಿದೆ. ಈ ಮಳಿಗೆಗಳನ್ನು ಮೇ ೪ರಿಂದ ವಾರದ ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರಗಳಂದು ಬೆಳಗ್ಗೆ ೬ರಿಂದ ಸಂಜೆ ೪ಗಂಟೆಯವರೆಗೆ ತೆರೆಯಬಹುದಾಗಿದ್ದು, ಮಳಿಗೆದಾರರು ಕಡ್ಡಾಯವಾಗಿ ಮಾಸ್ಕ್ ಅಥವಾ ಮುಖಗವಸು ಧರಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದ್ದಾರೆ.
ಯಾವುದೇ ಸಿಂಗಲ್ ಮತ್ತು ಮಲ್ಟಿ ಬ್ರಾಂಡೆಡ್ ಮಾಲ್/ ಶಾಪಿಂಗ್ ಕಾಂಪ್ಲೆಕ್ಸ್ ಗಳಲ್ಲಿರುವ ಮಳಿಗೆಗಳನ್ನು ತೆರೆಯಲು ಅವಕಾಶ ಇರುವುದಿಲ್ಲ. ಮಳಿಗೆಗಳಲ್ಲಿ ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಬೇಕು. ಹ್ಯಾಂಡ್ ಸ್ಯಾನಿಟೈಸರ್, ಸೋಂಕು ನಿವಾರಕಗಳನ್ನು ಕಡ್ಡಾಯವಾಗಿ ಬಳಸಬೇಕು. ಮಳಿಗೆಯಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಮುಖಗವಸು ಮತ್ತು ವೈಸರ್  ಧರಿಸಬೇಕು ಎಂದು ಅವರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss