Wednesday, August 17, 2022

Latest Posts

ಕೊಡಗು | ಮಹಿಳೆ ಸಾವಿನ ಪ್ರಕರಣದಲ್ಲಿ ಸಂಶಯದ ಅಂಶ ಗೋಚರಿಸಿಲ್ಲ: ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್

ಮಡಿಕೇರಿ: ಮಡಿಕೇರಿಯಲ್ಲಿ ಇತ್ತೀಚೆಗೆ ನಡೆದ ಭಾಗ್ಯಶ್ರೀ ಎನ್ನುವ ಮಹಿಳೆಯ ಆತ್ಮಹತ್ಯೆ ಪ್ರಕರಣದಲ್ಲಿ ಸಂಶಯದ ಯಾವುದೇ ಅಂಶಗಳು ಗೋಚರಿಸಿಲ್ಲವೆಂದು ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಭಾಗ್ಯಶ್ರೀಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ತಾಯಿ ಸಂಶಯಗಳನ್ನು ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಿದಾಗ ಸಂಶಯಕ್ಕೆ ಎಡೆಮಾಡಿಕೊಡಬಹುದಾದ ಯಾವುದೇ ಅಂಶಗಳು ಕಂಡು ಬಂದಿಲ್ಲವೆಂದು ಸ್ಪಷ್ಟಪಡಿಸಿದರು.
ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆ ನೇಣು ಬಿಗಿದು ಸಾವನ್ನಪ್ಪಿರುವುದಾಗಿ ಮಾಹಿತಿ ದೊರಕಿದೆ. ಇದರೊಂದಿಗೆ ಮಹಿಳೆ ಸಾವಿಗೀಡಾದ ಸ್ಥಳದ ಆಸುಪಾಸಿನ ಸಿಸಿ ಟಿವಿಗಳನ್ನು ಪರಿಶೀಲಿಸಿದಾಗ ಸಂಶಯಕ್ಕೆ ಎಡೆಮಾಡಿಕೊಡುವ ಯಾವುದೇ ಚಟುವಟಿಕೆ ಕಂಡು ಬಂದಿಲ್ಲ. ಹೀಗಿದ್ದೂ ಸಾವಿಗೀಡಾದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಎನ್ನುವ ಕಾರಣಗಳ ಹಿನ್ನೆಲೆಯಲ್ಲಿ ಆಕೆಯ ಗಂಡ ಶಾಹುಲ್ ಹಮೀದ್‌ನನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!