Wednesday, June 29, 2022

Latest Posts

ಕೊಡಗು ಮುಸ್ಲಿಂ ಕಪ್ ಕ್ರಿಕೆಟ್: ವೀರಾಜಪೇಟೆಯ ಬ್ಲ್ಯಾಕ್ ಕೋಬ್ರಾ ಚಾಂಪಿಯನ್

ಮಡಿಕೇರಿ:

ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಎಸ್‌ಇಎಸ್ ಬೇತ್ರಿ ಇವರ ಸಂಯುಕ್ತಾಶ್ರಯದಲ್ಲಿ ನಾಪೋಕ್ಲು ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 17ನೇ ವರ್ಷದ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವೀರಾಜಪೇಟೆಯ ಬ್ಲ್ಯಾಕ್ ಕೋಬ್ರಾ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ನೆಲ್ಯಹುದಿಕೇರಿಯ ರಾಯಲ್ ಬ್ರದರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಅತಿಥಿ ಗಣ್ಯರು ವಿಜೇತರಿಗೆ ಬಹುಮಾನ ವಿತರಿಸಿದರು.
ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಹಬ್ಬದ ಸಂಸ್ಥಾಪಕ ಕುಪ್ಪೊಂಡಂಡ ಅಬ್ದುಲ್ ರಶೀದ್ ಮತ್ತಿತರರು ಹಾಜರಿದ್ದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಸಮಾಜವನ್ನು ಒಗ್ಗೂಡಿಸುವ ಉದ್ದೇಶದಿಂದ ಆರಂಭಗೊಂಡ ಕ್ರಿಕೆಟ್ ಹಬ್ಬವನ್ನು ಇನ್ನು ಮುಂದೆಯೂ ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಲು ಆಯೋಜಕರಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕರೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss