ಹೊಸದಿಗಂತ ವರದಿ ಮಡಿಕೇರಿ:
ಕೋವಿಡ್ ಲಸಿಕೆಯ ಪೂರ್ವಭ್ಯಾಸವು (ಡ್ರೈ ರನ್) ಶುಕ್ರವಾರ ನಗರದ ಜಿಲ್ಲಾ ಆಸ್ಪತ್ರೆ, ಕುಶಾಲಗರದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯಿತು.
ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿವೀಕ್ಷಣೆ ನಡೆಸಿದರು.
ಕೊಡಗು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಕಾರ್ಯಪ್ಪ, ಡಿಎಚ್ಒ ಡಾ.ಕೆ.ಮೋಹನ್, ಡಾ.ಗೋಪಿನಾಥ್, ಡಾ.ಮಹೇಶ್ ಇತರರು ಇದ್ದರು.