ಹೊಸ ದಿಗಂತ ವರದಿ ಕೊಡಗು:
ಕೊಡಗು ಜಿಲ್ಲೆಯ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ 66ಗ್ರಾಮ ಪಂಚಾಯತ್ ಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಶೆ.77.35ರಷ್ಟು ಮತದಾನವಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಶೇ.75.09ರಷ್ಟು ಮತದಾನವಾಗಿದ್ದರೆ, ಸೋಮವಾರಪೇಟೆ ತಾಲೂಕಿನಲ್ಲಿ ಶೇ.78.70ರಷ್ಟು ಮತದಾನವಾಗಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.