Thursday, June 30, 2022

Latest Posts

ಕೊಡಗು| ಶನಿವಾರ 19 ಮಂದಿ ಗುಣಮುಖ, 9 ಮಂದಿಯಲ್ಲಿ ಕೊರೋನಾ ಸೋಂಕು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 9 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟರೆ, 19 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಇದರೊಂದಿಗೆ ಜಿಲ್ಲೆಯ ಒಟ್ಟು 264 ಮಂದಿಯ ಪೈಕಿ 174 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ.ಐದು ಮಂದಿ ಸಾವಿಗೀಡಾಗಿದ್ದು, 85 ಸಕ್ರಿಯ ಪ್ರಕರಣಗಳವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19ಸೋಂಕು ಹರಡುವುದನ್ನು ನಿಯಂತ್ರಿಸುವ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು,ಇತರೆ ದೇಶ, ಇತರ ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.ಅದರಂತೆ ಕಳೆದ 14 ದಿನಗಳಲ್ಲಿ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಇತರೆ ದೇಶದ 10,ಇತರೆ ರಾಜ್ಯದ 826, ಸೋಂಕಿತರ ಪ್ರಾಥಮಿಕ ಮತ್ತಯ ದ್ವಿತೀಯ ಸಂಪರ್ಕ ಹೊಂದಿರುವ 1806 ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 12,211 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 264 ಮಂದಿಯಲ್ಲಿ ಪಾಸಿಟಿವ್ ಬಂದಿದ್ದರೆ, 11653 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ.294 ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ.
ಪ್ರಸಕ್ತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 39 ಕೋವಿಡ್ ಕೇರ್ ಸೆಂಟರ್ ನಲ್ಲಿ 20 ಹಾಗೂ ಹೋಂ ಐಸೋಲೇಷನ್ ನಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 5 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದ್ದು,ನಿಯಂತ್ರಿತ ಪ್ರದೇಶಗಳ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss