ಹೊಸದಿಗಂತ ವರದಿ,ಕೊಡಗು:
ಸರಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 4,203 ಶಿಕ್ಷಕರು ಮತ್ತು 7,142 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು, ಈ ಪೈಕಿ 4 ಶಿಕ್ಷಕರಿಗೆ ಮತ್ತು 8 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಸಂಬಂಧ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಸೋಂಕಿತರನ್ನು ಸಂಪರ್ಕ ತಡೆಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು1,34,717 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 5929 ಮಂದಿಯಲ್ಲಿ ಪಾಸಿಟಿವ್,1,28,422 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 368ಮಂದಿ ವರದಿಯ ನಿರೀಕ್ಷೆಯಲ್ಲಿದ್ದಾರೆ.81ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಸಕ್ತ ಕೋವಿಡ್ ಆಸ್ಪತ್ರೆಯಲ್ಲಿ 11,ಹೋಂ ಐಸೋಲೇಷನ್ ನಲ್ಲಿ 66 ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ಹೊಸದಾಗಿ ಮಡಿಕೇರಿ ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಪ್ತಸಕ್ತ 79 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 38ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.