ಮಡಿಕೇರಿ :ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 81 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 36, ಸೋಮವಾರಪೇಟೆ ತಾಲೂಕಿನಲ್ಲಿ 33 ವೀರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಹೊರ ಜಿಲ್ಲೆಯವರ ಪೈಕಿ 2 ಹೊಸ ಪ್ರಕರಣಗಳು ದೃಢಪಟ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 4639ರಷ್ಟಾಗಿದ್ದು,ಈ ಪೈಕಿ 2775 ಮಂದಿ ಗುಣಮುಖರಾಗಿದ್ದಾರೆ. 714ಸಕ್ರಿಯ ಪ್ರಕರಣಗಳಿದ್ದು, 50 ಮಂದಿ ಸಾವಿಗೀಡಾಗಿದ್ದಾರೆ.ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 581 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.