Tuesday, June 28, 2022

Latest Posts

ಕೊಡಗು| ಸುಯೋಗ್ ಆಸ್ಪತ್ರೆಯಲ್ಲಿ ಜ.25 ರಿಂದ 30ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹೊಸದಿಗಂತ ವರದಿ, ಕೊಡಗು:

ಮೈಸೂರಿನ ಸುಯೋಗ್ ಆಸ್ಪತ್ರೆ ವತಿಯಿಂದ ಜ.25 ರಿಂದ 30ರ ವರೆಗೆ ಉಚಿತ ಹೃದ್ರೋಗ, ಆ್ಯಂಜಿಯೋಗ್ರಾಂ ಮತ್ತು ಆ್ಯಂಜಿಯೋಪ್ಲಾಸ್ಟಿ ತಪಾಸಣಾ ಶಿಬಿರ ನಡೆಯಲಿದ್ದು, ಜಿಲ್ಲೆಯ ಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಸುಯೋಗ್ ಆಸ್ಪತ್ರೆ 400 ಸುಸಜ್ಜಿತ ಹಾಸಿಗೆಗಳನ್ನು ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದ ಮೂಲ ಸೌಕರ್ಯಗಳನ್ನು ಒಳಗೊಂಡಿದೆ. ಆಧುನಿಕ ತಂತ್ರಜ್ಞಾನದ ವ್ಯವಸ್ಥೆಯಿದ್ದು, ಸರ್ಕಾರ ನಿಗದಿಪಡಿಸಿದ ದರದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಸುಯೋಗ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಆದಿತ್ಯ ಉಡುಪ ಅವರ ನೇತೃತ್ವದಲ್ಲಿ ಮೂರು ಮಂದಿ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಲಿದ್ದು, ಪ್ರತಿದಿನ 60 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ನೋಂದಾಯಿಸಿಕೊಂಡ ಎಲ್ಲರಿಗೂ ಉಚಿತ ಸಲಹೆ ನೀಡಲಾಗುವುದು. ಅಲ್ಲದೇ ಅವಶ್ಯವಿರುವವರಿಗೆ ಆ್ಯಂಜಿಯೋಗ್ರಾಂ ಮತ್ತು ಆ್ಯಂಜಿಯೋಪ್ಲಾಸ್ಟಿಗಳನ್ನು ಉಚಿತವಾಗಿ ಮಾಡಲಾಗುವುದೆಂದು ಮಾಹಿತಿ ನೀಡಿದರು.

ಆಸಕ್ತರು ಜ. 25ರ ಒಳಗಾಗಿ 0821-2566966, 9739555908 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು. ಜ.25 ರಂದು ಬೆಳಗ್ಗೆ 10.30ಕ್ಕೆ ಸುಯೋಗ್ ಆಸ್ಪತ್ರೆಯ ಆವರಣದಲ್ಲಿ ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಶಿಬಿರಕ್ಕೆ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ಮಾಜಿ ಸಚಿವ ಜಿ.ಟಿ. ದೇವೇಗೌಡ ವಹಿಸಲಿದ್ದಾರೆ ಎಂದರು.

ಹೃದ್ರೋಗ ತಜ್ಞ ಡಾ. ಆದಿತ್ಯ ಉಡುಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಡಿಕೇರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೃದಯದ ತೊಂದರೆ ಕಂಡು ಬರುತ್ತಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಇತರ ಜಿಲ್ಲೆಗಳಿಗೆ ಕರೆದುಕೊಂಡು ಹೋಗವಂತಾಗಿದೆ. ಆದ್ದರಿಂದ ಸಂಬಂಧಿಸಿದ ವ್ಯಕ್ತಿಗಳು ಶಿಬಿರದಲ್ಲಿ ಪಾಲ್ಗೊಂಡು ತಜ್ಞ ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ವಕೀಲ ತಮ್ಮಣ್ಣ ಗೌಡ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss