ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 9ಗಂಟೆವರೆಗೆ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ವೀರಾಜಪೇಟೆಯ ವಡ್ಡರಮಾಡು ಗ್ರಾಮವೊಂದರಲ್ಲೇ 11 ಪ್ರಕರಣ ವರದಿಯಾಗಿದೆ.
ಗ್ರಾಮದ 38 ವರ್ಷದ ಪುರುಷ, 10 ಮತ್ತು 12 ವರ್ಷದ ಬಾಲಕ, 30 ವರ್ಷದ ಮಹಿಳೆ, 4, 10 ಮತ್ತು 11 ವರ್ಷದ ಬಾಲಕ, 14 ವರ್ಷದ ಬಾಲಕಿ, 45 ವರ್ಷದ ಪುರುಷ, 16 ವರ್ಷದ ಬಾಲಕಿ ಹಾಗೂ 47 ವರ್ಷದ ಮಹಿಳಾ ಆರೋಗ್ಯ ಕಾರ್ಯಕರ್ತೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮತ್ತೊಂದೆಡೆ ಬೆಂಗಳೂರು ಪ್ರಯಾಣದ ಇತಿಹಾಸವಿರುವ ವೀರಾಜಪೇಟೆ ಚಿಕ್ಕಪೇಟೆಯ 29 ವರ್ಷದ ಪುರುಷ, ವೀರಾಜಪೇಟೆ ಚಾರ್ಮುಡಿಯ 57 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಮಡಿಕೇರಿ ಮಹದೇವಪೇಟೆಯ ಅಬ್ದುಲ್ ಕಲಾಂ ಲೇಔಟ್ನ 64 ವರ್ಷದ ಪುರುಷ, ಆಂಟಿಜನ್ ಪರೀಕ್ಷೆಯ ಮುಖಾಂತರ ಬೆಂಗಳೂರು ಪ್ರಯಾಣದ ಇತಿಹಾಸ ಹೊಂದಿರುವ ಸೋಮವಾರಪೇಟೆಯ ಅಬ್ಬೂರುಕಟ್ಟೆಯ 50 ವರ್ಷದ ಮಹಿಳೆಯಲ್ಲೂ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 487ಕ್ಕೆ ಏರಿಕೆಯಾಗಿದ್ದು, 322 ಮಂದಿ ಗುಣಮುಖರಾಗಿದ್ದಾರೆ. 157 ಸಕ್ರಿಯ ಪ್ರಕರಣಗಳಿದ್ದು, 9ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 113ಕ್ಕೆ ಏರಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.