Saturday, July 2, 2022

Latest Posts

ಕೊಡಗು: 10 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಬುಧವಾರ 10 ಹೊಸ ಕೋವಿಡ್-19ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ತಲಾ 2, ವೀರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿದೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19ಪ್ರಕರಣಗಳ ಸಂಖ್ಯೆ 5825ಆಗಿದ್ದು,ಈ ಪೈಕಿ 5675 ಮಂದಿ ಗುಣಮುಖರಾಗಿದ್ದಾರೆ. 70
ಸಕ್ರಿಯ ಪ್ರಕರಣಗಳಿದ್ದು, 80 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 51ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss