Tuesday, August 16, 2022

Latest Posts

ಕೊಡಗು | 12.50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಅಂಬೇಡ್ಕರ್ ಭವನ ಉದ್ಘಾಟನೆ

ಕುಶಾಲನಗರ: ಗ್ರಾಮಾಂತರ ಪ್ರದೇಶಗಳಲ್ಲಿ ಸರಕಾರದ ಅನುದಾನ ಸಮರ್ಪಕವಾಗಿ ಬಳಕೆಯಾದರೆ ಸಮುದಾಯದ ಬೆಳವಣಿಗೆ ಮತ್ತು ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ತಿಳಿಸಿದರು.
ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ 12.50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ಗ್ರಾಮಗಳಿಗೆ ವಿನಿಯೋಗಿಸುವ ಅನುದಾನದ ಪ್ರಗತಿ ದೇಶದ ಅಭಿವೃದ್ಧಿಗೆ ಪೂರಕವಾಗಿದ್ದು, ಇದರಿಂದ ದೇಶದ ಪ್ರಧಾನ ಮಂತ್ರಿಗಳ ಕನಸು ನನಸಾಗಲು ಸಾಧ್ಯ ಎಂದ ಅವರು, ಜಗತ್ತಿನಲ್ಲಿ ಹರಡಿರುವ ಕೊರೋನಾವನ್ನು ಓಡಿಸಲು ಎಲ್ಲರೂ ಕೈಜೋಡಿಸುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತಾನಾಡಿ, ಸಮುದಾಯದವರು ಒಗ್ಗೂಡಿ ಗ್ರಾಮದ ಅಭಿವೃದ್ಧಿ ಕೆಲಸಗಳಲ್ಲಿ ಭಾಗವಹಿಸಿದಾಗ ಗ್ರಾಮ ಮುಂದುವರೆಯಲು ಸಾಧ್ಯವಾಗುತ್ತದೆ ಎಂದರು.
ಇನ್ನೋರ್ವ ಮುಖ್ಯ ಅತಿಥಿ, ಜಿಲ್ಲಾ ಪಂಚಾಯತಿ ಸದಸ್ಯ ಶ್ರೀನಿವಾಸ ಮಾತಾನಾಡಿ, ವಿಧಾನ ಪರಿಷತ್ ಸದಸ್ಯರ ಪ್ರಯತ್ನದಿಂದ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಿದೆ. ಇದನ್ನು ಬಳಸುವವರು ಶುಚಿತ್ವವನ್ನು ಕಾಪಾಡಿಕೊಂಡು ಗ್ರಾಮದ ಎಲ್ಲಾ ಕಾರ್ಯಕ್ರಮಗಳಿಗೆ ಬಳಸುವಂತಾಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ ಸತೀಶ್ ವಹಿಸಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಧಳ ದಾನ ನೀಡಿದ ರಾಜಣ್ಣ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್ , ವಿಜಯಾ, ಚೇತನ್, ಶಿವನಂಜಪ್ಪ, ಕೂಡಿಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಹೆಬ್ಬಾಲೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜಶೇಖರ, ಅಭಿವೃದ್ಧಿ ಅಧಿಕಾರಿ ರಾಕೇಶ್‍ರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss