spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡೇರಿ ದೋಣಿ ಅವಘಡ: ಮೂರನೇ ಶವವೂ ಪತ್ತೆ!

- Advertisement -Nitte

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ದೋಣಿ ಅವಘಡದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಮೀನುಗಾರನ ಮೃತದೇಹವೂ ಈಗ ಪತ್ತೆಯಾಗಿದೆ.
ಮೂರನೇ ಮೃತ ದೇಹವು ಘಟನಾ ಸ್ಥಳದಿಂದ ದಕ್ಷಿಣಕ್ಕೆ ಒಂದು ಕಿ.ಮೀ. ದೂರದ ಸಮುದ್ರ ತೀರದಲ್ಲಿ ಕಂಡುಬಂದಿದೆ. ಇದನ್ನು ಶೇಖರ ಖಾರ್ವಿ ಅವರದ್ದೆಂದು ಗುರುತಿಸಲಾಗಿದೆ.
ಭಾನುವಾರ ಮಧ್ಯಾಹ್ನ ಸಂಭವಿಸಿದ್ದ ದೋಣಿ ಅವಘಡದಲ್ಲಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ‌ ನಾಗ ಖಾರ್ವಿ, ಲಕ್ಷ್ಮಣ ಖಾರ್ವಿ ಮತ್ತು ಶೇಖರ ಖಾರ್ವಿ ಅವರ ಮೃತದೇಹಗಳು ದಡ ಸೇರಿವೆ. ಸದ್ಯ ಮಂಜುನಾಥ ಖಾರ್ವಿ ಅವರು ಮಾತ್ರ ಪತ್ತೆಯಾಗಬೇಕಿದೆ ಎಂದು ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್ ಆರ್. ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss