Sunday, July 3, 2022

Latest Posts

ಕೊಡೇರಿ ದೋಣಿ ದುರಂತದಲ್ಲಿ ಮೃತ್ಯುವಪ್ಪಿದ ಮೀನುಗಾರರ ಕುಟುಂಬಗಳಿಗೆ ಪರಿಹಾರ ಮೊತ್ತದ ಆದೇಶ ಪತ್ರವನ್ನು ಹಸ್ತಾಂತರಿಸಿದ ಸಚಿವ ಕೋಟ

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ಕೆಲದಿನಗಳ ಹಿಂದೆ ನಡೆದ ದೋಣಿ ದುರಂತದಲ್ಲಿ ಮೃತ್ಯುವಪ್ಪಿದ ಉಪ್ಪುಂದ ಗ್ರಾಮದ ನಾಲ್ವರು ಮೀನುಗಾರರ ಕುಟುಂಬಗಳಿಗೆ ರಾಜ್ಯ ಸರಕಾರ ಬಿಡುಗಡೆ ಮಾಡಿದ ತಲಾ 6ಲಕ್ಷ ರೂ. ಪರಿಹಾರ ಮೊತ್ತದ ಆದೇಶ ಪತ್ರವನ್ನು ಶನಿವಾರ ಹಸ್ತಾಂತರಿಸಲಾಯಿತು.
ಲಕ್ಷ್ಮಣ ಖಾರ್ವಿ, ಮಂಜುನಾಥ ಖಾರ್ವಿ, ನಾಗ ಖಾರ್ವಿ ಮತ್ತು ಶೇಖರ ಖಾರ್ವಿ ಅವರ ಕುಟುಂಬಗಳಿಗೆ ಆದೇಶ ಪತ್ರವನ್ನು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮೃತರ ಮನೆಗೆ ತೆರಳಿ ಆದೇಶ ಪತ್ರ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿ, ಮೀನುಗಾರರ ಸಂಕಷ್ಟಕ್ಕೆ ಸರಕಾರ ಸ್ಪಂದನೆ ನೀಡಲಿದೆ. ಕೊಡೇರಿ ದೋಣಿ ದುರಂತದ ಕುರಿತು ಸರಕಾರಕ್ಕೆ ಮರುಕವಿದೆ. ಮೀನುಗಾರರು ಮನೆ ಕಟ್ಟಿಕೊಳ್ಳಲು ಮತ್ಸ್ಯಾಶ್ರಯ ಮನೆ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬಳಿ‌ ಮಾತನಾಡಲಾಗುವುದು. ಬೈಂದೂರು ಕರಾವಳಿಯ ಬ್ರೇಕ್ ವಾಟರ್, ಹೂಳೆತ್ತುವುದು ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮೃತರ ಕುಟುಂಬಗಳಿಗೆ ತಲಾ 25 ಸಾವಿರ ರೈ. ವೈಯಕ್ತಿಕ ಪರಿಹಾರ ಮೊತ್ತ ‌ನೀಡಿದರು. ಬ್ರೇಕ್ ವಾಟರ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಕೊಡೇರಿ ದೋಣಿ‌ ದುರಂತದಲ್ಲಿ‌ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೈಂದೂರು ತಾ.ಪಂ.ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮೀನುಗಾರರ ಮುಖಂಡರಾದ ಮದನ್ ಕುಮಾರ್, ತಾ.ಪಂ. ಸದಸ್ಯ ಕರಣ್ ಪೂಜಾರಿ ಹಾಗೂ ಮೀನುಗಾರರ ಮುಖಂಡರು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss