Wednesday, August 10, 2022

Latest Posts

ಕೊನೆಗೂ ಫಿಕ್ಸ್ ಆಯಿತು ಸಚಿವ ಸಂಪುಟ ವಿಸ್ತರಣೆ ಡೇಟ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೆಹಲಿಯಲ್ಲಿ ಇಂದು ಸಿಎಂ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಸಿದ್ದು, ಜನವರಿ 18 ರಂದು ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಇಂದು ಬೆಳಗ್ಗೆ ದೆಹಲಿಗೆ ಹೋಗಿದ್ದ ಯಡಿಯೂರಪ್ಪ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದರು.
ಬಳಿಕ ಸಚಿವ ಸಂಪುಟ ವಿಸ್ತರಣೆ ಸಂಬಂಧ ನಡ್ಡಾ, ಅಮಿತ್ ಶಾ ಹಾಗೂ ಅರುಣ್ ಸಿಂಗ್ ಜೊತೆ ಸಿಎಂ ಚರ್ಚೆ ಮಾಡಿದ ಬಳಿಕ ಕನ್ನಡ ಭವನಕ್ಕೆ ಆಗಮಿಸಿದ್ದರು. ಈ ವೇಳೆ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ಅಮಿತ್ ಶಾ, ‘ಜನವರಿ 18 ಅಥವಾ 19 ರಂದು ಸಂಪುಟ ವಿಸ್ತರಣೆ ಮಾಡಬಹುದು’ ಅಂತಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದಕ್ಕೆ ಬಿಎಸ್​ವೈ ಓಕೆ ಸರ್​.. ನಾವು 18 ರಂದೇ ವಿಸ್ತರಣೆ ಮಾಡುತ್ತೇವೆ.. ಅಲ್ಲದೇ ಖಾಲಿ ಇರುವ ಎಲ್ಲಾ ಸ್ಥಾನಗಳನ್ನ ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಅಂತಾ ಫೋನಿನಲ್ಲಿಯೇ ಮನವಿ ಮಾಡಿಕೊಂಡಿದ್ದಾರೆ. ಅದಕ್ಕೆ ಅಮಿತ್ ಶಾ ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ.
ಇಂದು ರಾತ್ರಿ ಬೆಂಗಳೂರಿಗೆ ಸಿಎಂ ಆಗಮಿಸಲಿದ್ದು, ರಾಜ್ಯದ ಬಿಜೆಪಿ ನಾಯಕರು ಹಾಗೂ ಸಚಿವ ಸ್ಥಾನದ ಆಸೆ ಹೊಂದಿರುವವರ ಜೊತೆಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss