Tuesday, June 28, 2022

Latest Posts

ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆ

ಹೊಸ ದಿಗಂತ ವರದಿ, ಮೈಸೂರು:

ಕಳೆದ ಒಂದು ತಿಂಗಳಿoದ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರ ಬೋನಿಗೆ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಾಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳಿoದ ಸಾಕು ಪ್ರಾಣಿಗಳ ಮೇಲೆ ಹೆಣ್ಣು ಚಿರತೆ ದಾಳಿ ನಡೆಸಿ, ಕಾಟ ನೀಡುತ್ತಿತ್ತು. ನೀಡಿತ್ತು. ಚಿರತೆ ಹಾವಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ನಂತರ ಗ್ರಾಮದ ರೈತ ಚಂದ್ರಶೇಖರ್ ಜಮೀನಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಬೋನು ಇರಿಸಲಾಗಿತ್ತು. ಇದೀಗ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು, ಅದನ್ನು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮತ್ತೆ ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಇನ್ನು ಗ್ರಾಮದ ಸುತ್ತ ಮುತ್ತ ಸಾಕಷ್ಟು ಚಿರತೆಗಳು ಇರುವ ಆತಂಕ ಎದುರಾಗಿದ್ದು, ಮತ್ತೆ ಬೋನು ಇರಿಸಿ, ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಸಿಬ್ಬಂದಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss