ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊನೆಗೂ ಸಿಕ್ಕಿತು ಕಾಸರಗೋಡು-ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಮಂಗಳೂರು: ಕಾಸರಗೋಡು-ಮಂಗಳೂರು ನಡುವೆ ಸೆಪ್ಟೆಂಬರ್ 21ರಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕೊರೋನಾ ಸೋಂಕಿನ ಭೀತಿಯಿಂದ ಕಳೆದ ಮಾರ್ಚ್ ತಿಂಗಳಿನಿಂದ ಲೊಚ್ಲ್ ಡೌನ್ ಹೇರಿದ ಪರಿಣಾಮ ಉಭಯ ಜಿಲ್ಲೆಗಳ ಅಂತಾ ರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದರ ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಈಗ ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಉಭಯ ಜಿಲ್ಲಾಡಳಿತಗಳ ಆದೇಶದ ಬಳಿಕ ಕೆಲವು ಪ್ರಮುಖ ಗಡಿಗಳನ್ನು ತೆರವುಗೊಳಿಸಿ ಅಂತಾ ರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇದರಿಂದ ಮಂಗಳೂರು-ಕಾಸರಗೋಡು ಜಿಲ್ಲೆಗಳ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಆದೇಶ ಹೊರಬಿದ್ದಿದೆ.
ಈ ಕುರಿತು ಈಗಾಗಲೇ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಬೇಡಿಕೆಗನುಗುಣವಾಗಿ ಬಸ್ ಸಂಚಾರ ನಡೆಸಲಿವೆ. ಒಂದು ಬಸ್ಸಿಗೆ 40 ಮಂದಿ ಪ್ರಯಾಣಿಕರಿದ್ದಲ್ಲಿ ಮಾತ್ರವೇ ಸಂಚಾರ ನಡೆಸಲಿದೆ.
ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು ಹಾಗೂ ಕಾಸರಗೋಡು-ಪಂಜಿಕ್ಕಲ್ ರಸ್ತೆಗಳಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss