ಹೊಸದಿಗಂತ ವರದಿ,ಕೊಪ್ಪಳ:
ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ದಿಂದ ಮೂರು ದಿನಗಳ ಕಾಲ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಅವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಚಾಲನೆ ನೀಡಿದರು.
ನಂತರ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಮಾತನಾಡಿ, ಕೋವಿಶೀಲ್ಡ್ ಲಸಿಕೆ ಪಡೆಯುವ ಮುನ್ನ ನನಗೆ ಯಾವುದೇ ರೀತಿಯ ಭಯ ಇರಲಿಲ್ಲ. ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಲಸಿಕೆ ಹಾಕಲಾಗುವುದು. ಪ್ರತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು, ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸೇರಿದಂತೆ ಇತರೇ ಅಧಿಕಾರಿಗಳು ಲಸಿಕೆ ಹಾಕಿಸಿಕೊಂಡರು.
ಈ ಸಂದರ್ಭದಲ್ಲಿ ಡಿಎಚ್ಓ ಡಾ. ಅಲಕನಾಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದಾನರಡ್ಡಿ , ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.