Monday, August 8, 2022

Latest Posts

ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೊರೋನಾ ಸೋಂಕು ದೃಢ

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಕುಕನೂರಿನ 30 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ ಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸೋಂಕಿತ ವ್ಯಕ್ತಿಯು ಜೂನ್ 10 ರಂದು ರಾಜಸ್ತಾನದಿಂದ ಕುಕನೂರಿಗೆ ಆಗಮಿಸಿದ್ದು, ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಸದ್ಯ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss