Thursday, August 18, 2022

Latest Posts

ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ: 13ಕ್ಕೆ ಏರಿಕೆ, ನಾಲ್ವರು ಗುಣಮುಖ…!

ಕೊಪ್ಪಳ: ದಿನದಿಂದ ದಿನಕ್ಕೆ ಏರುತ್ತಿರುವ ಕೊವಿಡ್-೧೯ ಕೊಪ್ಪಳ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಅದರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.

ಜಿಲ್ಲೆಯ ಗಂಗಾವತಿಯ ಗಾಂಧಿ ಸರ್ಕಲ್ ಹತ್ತಿರದ ಅಂದೂನ್ ಬಜಾರ್‌ನ ಜಾಮೀಯಾ ಮಸೀದಿಯ 32 ವರ್ಷದ ಮುಲ್ಲಾಹ‌ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ‌ ಕೊರೊನಾ ದೃಢಪಟ್ಟಿದೆ.

ಈ ವ್ಯಕ್ತಿ ಜೂನ್ 8ರಂದು ಆಂಧ್ರಪ್ರದೇಶದ ಆಧೋನಿಯಿಂದ ಗಂಗಾವತಿಗೆ ವಾಪಸಾಗಿದ್ದು, ಈ ಕೇಸ್‌ಗೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 13 ಕೊರೊನಾ ಕೇಸ್‌ಗಳು ದೃಢಪಟ್ಟಿದ್ದು, ನಾಲ್ವರು ಗುಣಮುಖರಾಗಿದ್ದಾರೆ. ಇನ್ನುಳಿದ ಸೋಂಕಿತರಿಗೆ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲ್ ಡೌನ್: ತಾಲ್ಲೂಕು ಆಡಳಿತದ ಅಧಿಕಾರಿಗಳು ಮಸೀದಿ ಪ್ರದೇಶ, ಡೈಲಿ ಮಾರ್ಕೆಟ್, ಮಾಂಸದ ಮಾರ್ಕೆಟ್, ಕೋಟೆ ಆಂಜನೇಯ, ವೆಂಕಟರಮಣ ಗುಡಿ, ಬಸವಣ್ಣ ಸರ್ಕಲ್ ಪ್ರದೇಶ, ಸಿಪಿಎಸ್ ಸ್ಕೂಲ್ ಪ್ರದೇಶವನ್ನು ಸರ್ವೇ ಮಾಡಿ ಸೀಲ್ ಡೌನ್ ಮಾಡುವ ಸಿದ್ದತೆ ನಡೆಸಿದ್ದಾರೆ.

ಸೀಲ್ ಡೌನ್ ಪ್ರದೇಶದಲ್ಲಿ ಕ್ರಿಮಿನಾಶಕ ಸಿಂಪರಣೆ ಮಾಡಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಪ್ರದೇಶದಲ್ಲಿ ವ್ಯಾಪಾರ ವಹಿವಾಟು, ಶಾಲಾ ಕಾಲೇಜು ಚಟುವಟಿಕೆ ಸ್ಥಗಿತ ಮಾಡಲು ಸೂಚಿಸಲಾಗಿದೆ. ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇಡೀ ಪ್ರದೇಶದಲ್ಲಿ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಕೋವಿಡ್-19 ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!