ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ ಸೇರಿ 84 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈಗಾಗಲೇ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಗೆ ಕೋರೋನಾ ಸೋಂಕು ದೃಡಪಟ್ಟಿದ್ದು, ಶನಿವಾರ ಶಾಸಕ ಹಾಲಪ್ಪ ಆಚಾರ ಅವರಿಗೆ ಸೋಂಕು ಇರುವುದು ದೃಡ ಪಟ್ಟಿದೆ. ಆದರೆ ಇತ್ತಿಚೆಗೆ ಸಚಿವ ಸಭೆಯಲ್ಲಿ ಭಾಗವಹಿಸಿದ್ದರಿಂದ ಹಾಗೂ ಕೊರೋನಾ ದೃಡ ಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಕೊಪ್ಪಳ ತಾಲೂಕಿನಲ್ಲಿ 26 ಜನರಿಗೆ, ಗಂಗಾವತಿ ತಾಲೂಕಿನಲ್ಲಿ 36 ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ 12 ಜನರಿಗೆ ಯಲಬುರ್ಗಾ ತಾಲೂಕಿನಲ್ಲಿ 10 ಜನರಿಗೆ ಸೇರಿದಂತೆ ಸೋಂಕಿತರ ಸಂಖ್ಯೆ 1278 ಕ್ಕೆ ಏರಿಕೆಯಾಗಿದೆ.
ಆದರೆ ಜಿಲ್ಲೆಯಲ್ಲಿ ಶನಿವಾರ 36 ಜನ ಸೇರಿದಂತೆ ಇಲ್ಲಿವರೆಗೂ 793 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ. ಉಳಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು,211 ಜನ ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.