ಕೊಪ್ಪಳ: ಜಿಲ್ಲೆಯಲ್ಲಿ ಮಂಗಳವಾರ 155 ಜನರಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ.61 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದು ಸೋಂಕಿಗೆ ಮೂವರು ಸಾವಿಗಿಡಾಗಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ 84 ಜನರಿಗೆ, ಗಂಗಾವತಿ ತಾಲೂಕಿನಲ್ಲಿ 50 ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ 18 ಜನರಿಗೆ ಯಲಬುರ್ಗಾ ತಾಲೂಕಿನಲ್ಲಿ 03 ಜನರಿಗೆ ಸೇರಿದಂತೆ ಸೋಂಕಿತರ ಸಂಖ್ಯೆ 1,757 ಕ್ಕೆ ಏರಿಕೆಯಾಗಿದೆ.
ಆದರೆ ಜಿಲ್ಲೆಯಲ್ಲಿ ಮಂಗಳವಾರ 61 ಜನ ಸೇರಿದಂತೆ ಇಲ್ಲಿವರೆಗೂ 942 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ.
ಉಳಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.