ಕೊಪ್ಪಳ: ಜಿಲ್ಲೆಯಲ್ಲಿ ಶನಿವಾರ ೧೯೧ ಜನರಿಗೆ ಸೋಂಕು ದೃಡಪಟ್ಟಿದ್ದು, ೨೦೪ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ. ಕೊವಿಡ್-೧೯ಗೆ ಇಬ್ಬರು ಸಾವಿಗೀಡಾಗಿದ್ದಾರೆ.
ಕೊಪ್ಪಳ ತಾಲೂಕಿನಲ್ಲಿ ೪೪ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೧೧೧ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೧೩ ಜನರಿಗೆ ಯಲಬುರ್ಗಾ ತಾಲೂಕಿನಲ್ಲಿ ೨೩ ಜನರುಗೆ ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೩,೪೮೯ ಕ್ಕೆ ಏರಿಕೆಯಾಗಿದೆ.
ಆದರೆ ಜಿಲ್ಲೆಯಲ್ಲಿ ಇಬ್ಬರು ಸಾವಿಗಿಡಾಗಿದ್ದು, ಶನಿವಾರ ೨೦೪ ಜನ ಸೇರಿದಂತೆ ಇಲ್ಲಿವರೆಗೂ ೨,೨೫೧ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದಾರೆ. ಅದರಲ್ಲಿ ಶನಿವಾರ ೫೯ ಜನ ಸೇರಿದಂತೆ ಒಟ್ಟು ೭೦೭ ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಉಳಿದ ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಅವರು ತಿಳಿಸಿದ್ದಾರೆ.