Thursday, August 18, 2022

Latest Posts

ಕೊಪ್ಪಳ: ದೇವಸ್ಥಾನದ ಹುಂಡಿ ಕಳ್ಳತನ

ಕೊಪ್ಪಳ: ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದಲ್ಲಿರುವ ಹೊನ್ನಲಾಂಬಿಕ ದೇವಸ್ಥಾನದ ಹುಂಡಿ ಕಳ್ಳತವಾಗಿದೆ. ಗುರುವಾರ ತಡ ರಾತ್ರಿ ವೇಳೆ ಕಳ್ಳರು ಹುಂಡಿ ಒಡೆದು ಅದರಲ್ಲಿನ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ ಗ್ರಾಮಸ್ಥರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹುಂಡಿಯಲ್ಲಿ ಹತ್ತಾರು ಸಾವಿರ ರೂಪಾಯಿ ಸಂಗ್ರಹವಾಗಿತ್ತು ಎಂದು ಹೇಳಲಾಗುತ್ತಿದೆ.
ಸುಮಾರು ಒಂದು ವರ್ಷದ ಹಿಂದೆ ಇದೇ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿ ಕಳುವಾಗಿತ್ತು. ಈಗ ಹುಂಡಿ ಕಳ್ಳತನ ಮಾಡಿ, ನಗ ನಾಣ್ಯ ದೋಚಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!