Saturday, July 2, 2022

Latest Posts

ಕೊಪ್ಪಳ| ಭಾರಿ ಮಳೆಗೆ ತುಂಬಿ ಹರಿದ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

ಕೊಪ್ಪಳ : ಬುಧವಾರ ಸಂಜೆ ಗದಗ ಜಿಲ್ಲೆಯ ಕೆಲವು ಭಾಗದಲ್ಲಿ ಸುರಿದ ಮಳೆಗೆ ತುಂಬಿ ಹರಿದ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಬೈಕ್ ಸವಾರನನ್ನು ರಕ್ಷಿಸಿದ ಘಟನೆ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಹಳ್ಳದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಜಿಲ್ಲೆಯ ಬಹುತೇಕ ಹಳ್ಳಕೊಳ್ಳಗಳು ಉಕ್ಕಿಹರಿಯುತ್ತಿದ್ದು, ಘಟ್ಟಿರಡ್ಡಿಹಾಳ ಗ್ರಾಮದ ಹಿರೇಹಳ್ಳ ಕೂಡ ಉಕ್ಕಿ ಹರಿಯುತ್ತಿದೆ. ಆಳವಂಡಿ, ಕವಲೂರು, ಬನ್ನಿಕೊಪ್ಪ, ಸೇರಿದಂತೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿಗೆ ಸಂಪರ್ಕ ಕಲ್ಪಿಸುವಂತ ಮಾರ್ಗಮದ್ಯ ಹಳ್ಳ ಹರಿಯುತ್ತಿದ್ದು ರಸ್ತೆ ಸಂಪರ್ಕ ಸ್ಥಗಿತಗೊಂಡಿದ್ದ. ಈ ಮದ್ಯ ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿದ್ದ ಬೈಕ್ ಸವಾರ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಇದನ್ನು ಗಮನಿಸಿದ ಸ್ಥಳೀಯರು ಬೈಕ್ ಸವಾರನನ್ನು ರಕ್ಷಿಸಿದ್ದಾರೆ.
ಇನ್ನೂ ಹಳ್ಳ ತುಂಬಿದಾಗ ಇಂತಹ ಅವಘಡಗಳು ನಡೆಯುತ್ತಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ಹಳ್ಳಕ್ಕೆ ಸೇತುವೆ ನಿರ್ಮಿಸಿ ಕೊಡುವಂತೆ ಸಾಕಷ್ಟು ಭಾರಿ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ, ಪ್ರತಿಯೊಬ್ಬರು ಚುನಾವಣೆ ಬಂದಾಗ ಆಶ್ವಾಸನೆ ನೀಡಿ ಹೋಗುತ್ತಾರೆ ಹೊರತು ಹಳ್ಳಕ್ಕೆ ಸೇತುವೆ ನಿರ್ಮಿಸುವ ಕಾರ್ಯ ಕೈಗೊಂಡಿಲ್ಲ ಎಂದು ಜನಪ್ರತಿನಿಧಿಗಳ‌ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss