Wednesday, July 6, 2022

Latest Posts

ಕೊಪ್ಪಳ ಸಂಸದ ಸಂಗಣ್ಣ ಕರಡಿಗೂ ಕೊರೋನಾ ಸೋಂಕು ದೃಢ

ಕೊಪ್ಪಳ: ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಬುಧವಾರ ಕೊರೋನಾ ಸೋಂಕು ಇರುವುದು ದೃಡವಾಗಿದೆ.
ಈ ಕುರಿತು ತನ್ನ ಟ್ವೀಟರ ಮೂಲಕ ತಿಳಿಸಿದ ಅವರು, ಮಂಗಳವಾರ ಸಿಂಧನೂರಿಗೆ ಹೋಗಿ ಬಂದಾಗ ರಾತ್ರಿ ಚಳಿ ಜ್ವರ ಬಂದ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ಪರೀಕ್ಷೆ ಮಾಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ.
ಈ ಕುರಿತು ಯಾರು ಆತಂಕ ಪಡುವುದು ಅಗತ್ಯವಿಲ್ಲ. ನಾನು ಆರಾಮವಾಗಿದ್ದೇನೆ. ವೈಧ್ಯರ ಸಲಯಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದ್ದರಿಂದ ನನ್ನ ಸಂಪರ್ಕಕ್ಕೆ ಬಂದವರು ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss